Share this news

ಕಾರ್ಕಳ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ‌.
ಅಂಡಾರು ಗ್ರಾಮದ ಹಲೆಕ್ಕಿ ನಿವಾಸಿ ನರಸಿಂಹ ನಾಯಕ್ ಎಂಬವರ ಪುತ್ರ ಶಯನ್ (22) ಎಂಬ ಯುವಕ ಮೃತಪಟ್ಟ ದುರ್ದೈವಿ.
ಶಯನ್ ಭಾನುವಾರ ತಡರಾತ್ರಿ ಅಜೆಕಾರು ಕಡೆಯಿಂದ ತನ್ನ ಮನೆಯಾದ ಅಂಡಾರಿಗೆ ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಕೊಂಬಗುಡ್ಡೆ ಎಂಬಲ್ಲಿ ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಶಯನ್ ಅವರನ್ನು ಅದೇ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಬಳಿಕ ಆಂಬುಲೆನ್ಸ್ ಗೆ ಕರೆ ಮಾಡಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತ ಶಯನ್ ಅವರು ಕಳೆದ ಒಂದು ವರ್ಷದ ಹಿಂದಷ್ಟೇ ಒರಿಸ್ಸಾದ ಕೆಲ್’ಟೆಕ್ ಎನರ್ಜೀಸ್ ಲಿಮಿಟೆಡ್ ನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಶಯನ್ ಇದೀಗ ವಿಧಿಯಾಟಕ್ಕೆ ಬಲಿಯಾಗಿದ್ದು,ಇಡೀ ಕುಟುಂಬ ಆಘಾತಗೊಂಡಿದೆ.

 

Leave a Reply

Your email address will not be published. Required fields are marked *