ನವದೆಹಲಿ: ಭೂಗತ ಪಾತಕಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಸಾವಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು ಮತ್ತು ಅದಕ್ಕೂ ಮುನ್ನ ನಡೆದ ಘಟನೆಗಳನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿದೆ.
ಅತಿಕ್ ಮತ್ತು ಅಶ್ರಫ್ ಅವರನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನೇರವಾಗಿ ಆಸ್ಪತ್ರೆಗೆ ಏಕೆ ಕರೆದೊಯ್ಯಲಿಲ್ಲ ಮತ್ತು ಅವರನ್ನು ಏಕೆ ಮೆರವಣಿಗೆ ಮಾಡಲಾಯಿತು ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶವನ್ನು ಕೇಳಿದೆ. ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ದೀಪಂಕರ್ ದತ್ತಾ ಅವರ ನ್ಯಾಯಪೀಠವು ಅಫಿಡವಿಟ್ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸೂಚಿಸಿತು ಮತ್ತು ಮೂರು ವಾರಗಳ ನಂತರ ಈ ವಿಷಯವನ್ನು ಪಟ್ಟಿ ಮಾಡಿತು.