ವಾರ್ಷಿಕ ಮಹೋತ್ಸವದ ಪ್ರಮುಖ ಗಾಯನ ಬಲಿಪೂಜೆಯನ್ನು ಪುತ್ತೂರಿನ ಧರ್ಮಾಧ್ಯಕ್ಷರಾದ ಜೀವರ್ಗಿಸ್ ಮಾರ್ ಮಕಾರಿಯೋಸ್ ನೆರವೇರಿಸಿ ಪ್ರಲೋಭನೆಗೆ ಒಳಗಾಗದೆ ಅಚಲವಾಗಿ ಸರ್ವವನ್ನು ಎದುರಿಸಬೇಕು ಎಂದರು
ಈ ಸಂದರ್ಭದಲ್ಲಿ ಸಂದೇಶ ನೀಡಿದ ಅವರು,ಈ ಪುಣ್ಯಕ್ಷೇತ್ರದ ಮಹೋತ್ಸವದ ಅಂಗವಾಗಿ ‘ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥಿಸೋಣ, ದೈನಂದಿನ ಜೀವನದಲ್ಲಿ ನಾವೆಲ್ಲರೂ ವಿವಿಧ ಪ್ರಲೋಭನೆಗಳನ್ನು ಎದುರಿಸಿ ಹಿಮ್ಮೆಟ್ಟಿ ನಿಂತು ಅವೆಲ್ಲವನ್ನು ಗೆಲ್ಲಬೇಕು. ಪ್ರಭು ಕ್ರಿಸ್ತರು ಸೈತಾನನ ಪ್ರಲೋಭನೆಯನ್ನು ಮೆಟ್ಟಿ ನಿಂತರು. ಆದರೆ ಆದಾಮ್ ಹಾಗೂ ಹಾವ್ವ ವಿಷಸರ್ಪದ ಪ್ರಲೋಭನೆಗೆ ಒಳಗಾದರು. ಹೀಗಾಗಿ ಪ್ರಲೋಭನೆ ನಮ್ಮನ್ನು ಸದಾಕಾಲಾ ಕಾಡುತ್ತಿರುವಾಗ ಯೇಸುವಿನಂತೆ ನಾವೆಲ್ಲರೂ ಅದನ್ನು ಎದುರಿಸಿ ಜಯಶೀಲರಾಗಬೇಕು ಎಂದರು
ಮಂಗಳವಾರ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ಪುಣ್ಯಕ್ಷೇತ್ರದ ಸಂತ ಲಾರೆನ್ಸರ ಬಸಿಲಿಕಾಗೆ ಭೇಟಿ ನೀಡಿ ಪ್ರಾರ್ಥಿಸಿದರು.ಇದೇವೇಳೆ ರೋಗಿಗಳು, ಅಸ್ವಸ್ಥರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ದಿನದ ಇತರ ಬಲಿಪೂಜೆಗಳನ್ನು ವಂ. ಜೋಕಿಮ್ ಡಿಸೋಜ, ಕಾಪುಚಿನ್, ಉಡುಪಿ, ವಂ. ಆಲ್ವಿನ್ ಸಿಕ್ವೆರಾ, ಕಾರ್ಮೆಲ್ ಸಭೆ, ವಂ. ಲೂಯಿಸ್ ಡೇಸಾ, ನಕ್ರೆ, ವಂ. ವಿನ್ಸೆಂಟ್ ಕುವೆಲ್ಲೊ, ಬೈಂದುರ್. ವಂ. ಲಿಯೋ ಪ್ರವೀಣ್ ಡಿಸೋಜ, ಉದ್ಯಾವರ್, ಅನಿಲ್ ಡಿಸೋಜ, ಪೆರಂಪಳ್ಳಿ, ಡಾ. ಜೀವರ್ಗಿಸ್ ಮಾರ್ ಮಕಾರಿಯೋಸ್ ಪುತ್ತೂರಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು, ವಂ. ವಾಲ್ಟರ್ ಡಿಮೆಲ್ಲೊ ಬೆಳ್ತಂಗಡಿ, ವಂ. ಒನಿಲ್ ಡಿಸೋಜ, ಮೂಡಬಿದ್ರೆ, ವಂ. ಹೆರಾಲ್ಡ್ ಪಿರೇರಾ, ಕಣಜಾರ್ ಇವರುಗಳು ಅರ್ಪಿಸಿದರು.
ಜಾತಿ ಭೇದವಿಲ್ಲದೇ ಜನಸ್ತೋಮವು ತಮ್ಮ ಹರಕೆಯ ಮೊಂಬತ್ತಿಯನ್ನು ಬೆಳಗಿಸಿದರು. ಪವಿತ್ರ ಪುಷ್ಕರಣಿಯ ಸನ್ನಿಧಿ ಧಾವಿಸಿ ತೀರ್ಥವನ್ನು ಪಡೆದು, ದೀರ್ಘ ಜಪತಪ ವಿಶೇಷ ಪ್ರಾರ್ಥನೆ ಹಾಗೂ ಬಸಿಲಿಕದ ಮಹಾನ್ ಪಾಲಕ ಸಂತ ಲಾರೆನ್ಸರ ದಿವ್ಯ ಸಾನಿಧ್ಯಕ್ಕೆ ಬಂದು ಪ್ರಾರ್ಥಿಸಿ ತೆರಳಿದರು. ದಿನದ ಅಂತಿಮ ಬಲಿಪೂಜೆಯನ್ನು ರಾತ್ರಿ 10 ಗಂಟೆಗೆ ನೆರವೇರಿಸಿ ಮಹೋತ್ಸವದ ತ್ರತೀಯ ದಿನದ ಬಲಿಪೂಜೆಗಳನ್ನು, ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಭಕ್ತಿ- ಆಚರಣೆಗಳನ್ನು ಭಕ್ತಿಯುತವಾಗಿ ನೇರವೇರಿಸಿ ಮುಕ್ತಾಯಗೊಳಿಸಲಾಯಿತು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ