Share this news

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯ ಕರಿಯ ಪೂಜಾರಿ ತನಗೆ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲವೆಂಬ ಬೇಸರದಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ

ಈ ಕುರಿತು ಅವರು ಮಂಗಳವಾರ ಕಾರ್ಕಳದ ಹೋಟೆಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಳೆದ 25 ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತನಾಗಿದ್ದ ನನಗೆ ಈ ಬಾರಿಯ ಅಧ್ಯಕ್ಷ ಚುನಾವಣೆಯಲ್ಲಿ ಹಿರಿಯ ಸದಸ್ಯನ ನೆಲೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕಿತ್ತು ಆದರೆ ಶಾಸಕರು ಹಾಗೂ ಪಕ್ಷದ ಮುಖಂಡರು ಮೂರು ಬಾರಿ ಪಂಚಾಯಿತಿ ಸದಸ್ಯನಾಗಿ ನನ್ನ ಹಿರಿತನಕ್ಕೆ ಗೌರವ ಕೊಡದೇ ಕೇವಲ ಒಂದೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಸದಸ್ಯನನ್ನು ಅಧ್ಯಕ್ಷರನ್ನಾಗಿಸಿ ನನಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿ ಚುನಾವಣೆಯಲ್ಲೂ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿಗೆ ಅತ್ಯಧಿಕ ಮತ ಗಳಿಕೆ ಹಾಗೂ ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಪ್ರಾಮಾಣಿಕ ಶ್ರಮವಿತ್ತು.ಆದರೆ ನನ್ನ ಹಿರಿತನಕ್ಕೆ ಬಿಜೆಪಿ ನಾಯಕರು ಅಪಮಾನ ಮಾಡಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಕರಿಯ ಪೂಜಾರಿ ಹೇಳಿದ್ದಾರೆ
ಈ ಸಂದರ್ಭದಲ್ಲಿ ಕೆಡಿಪಿ ಮಾಜಿ ಸದಸ್ಯ ಚಂದ್ರ ಮುಂಡ್ಕೂರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *