ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತ ಚಾಲನೆ ನೀಡಿದರು.
ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಪಡಿತರ ಕುಟುಂಬದ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಪಾವತಿಯಾಗಲಿದೆ. ರಾಜ್ಯದಲ್ಲಿ 10,89,899 ಅಂತ್ಯೊದಯ ಪಡಿತರ ಚೀಟಿಗಳಿದ್ದು ಒಟ್ಟು 44,84,178 ಮಂದಿ ಫಲಾನುಭವಿಗಳಿದ್ದಾರೆ. 1,17,41,561 ಬಿಪಿಎಲ್ ಕಾರ್ಡುಗಳಿದ್ದು 3,97,64,489 ಮಂದಿ ಫಲಾನುಭವಿಗಳಿದ್ದಾರೆ.
ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.
2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿAದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು.ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ಧರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.