Share this news

ನವದೆಹಲಿ: ಅಧಿವೇಶನದ ಕೊನೆಯ ದಿನ ಕೇಂದ್ರ ಸರ್ಕಾರ ಐತಿಹಾಸಿಕ ಮಸೂದೆಗಳನ್ನು ಮಂಡಿಸಿದೆ. ಬ್ರಿಟೀಷರ ಕಾಲದಲ್ಲಿ ರಚಿಸಲಾದ ಕಾನೂನುಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸದ್ಯ ಭಾರತದ ಪರಿಸ್ಥಿತಿ ಹಾಗೂ ಭಾರತೀಯ ನಾಗರೀಕರ ರಕ್ಷಣೆಗಾಗಿ ಪರಿಷ್ಕೃತ ಬಿಲ್ ಮಂಡಿಸಲಾಗಿದೆ. ಪ್ರಮುಖವಾಗಿ ಮಹಿಳೆ ಹಾಗೂ ಮಕ್ಕಳ ವಿರುದ್ಧದ ಅಪರಾಧಕ್ಕೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೊಸ ನಿಯಮದ ಪ್ರಕಾರ ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಇನ್ನು ಗ್ಯಾಂಗ್ ರೇಪ್ ಸೇರಿದಂತೆ ಇತರ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಮುಂಗಾರು ಅಧಿವೇಶನದ ಕೊನೆಯ ದಿನ ಅಮಿತ್ ಶಾ ಮಹತ್ವದ ಮಸೂದೆ ಮಂಡಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಮಸೂದೆ, ಭಾರತೀಯ ಪುರಾವೆ ಮಸೂದೆ ಮತ್ತು ಭಾರತೀಯ ನಾಗರಿಕ ರಕ್ಷಣಾ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮೂಲಕ ಮಹಿಳೆಯರು, ಹೆಣ್ಣು ಮಕ್ಕಳು ಮೇಲಿನ ಅಪರಾಧಕ್ಕೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗಿದೆ. ಈ ಮೂರು ತಿದ್ದುಪಡಿ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಕಳುಹಿಸಲಾಗುವುದು ಎಂದು ಅಮಿತಿ ಶಾ ಸದನದಲ್ಲಿ ಹೇಳಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಪರಾಧಿಗೆ 20 ವರ್ಷ ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸಾಮೂಹಿಕ ಹತ್ಯೆ, ಲಿಂಚಿAಗ್ ಸೇರಿದಂತೆ ಇತರ ಅಪರಾಧ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಭಾರತದಲ್ಲಿ ಅಪರಾಧಿಗಳಿಗೆ ಭಯ ಹುಟ್ಟಿಸುವ ಹಾಗೂ ಅಪರಾಧಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕಠಿಣ ಕಾನೂನುಗಳ ಅವಶ್ಯಕತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ.

Leave a Reply

Your email address will not be published. Required fields are marked *