Share this news

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷದಿಂದ ಜೈಲುವಾಸ ಅನುಭವಿಸುತ್ತಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಹೈಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಮುರುಘಾಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ಶ್ರೀಗಳಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲೇ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.

ಅರ್ಜಿ ಕುರಿತು ಈ ಹಿಂದೆ ನಡೆದ ವಿಚಾರಣೆ ವೇಳೆ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರವಾಗಿ ವಕೀಲ ಡಿ.ಸಿ. ಶ್ರೀನಿವಾಸ್‌, ಆರೋಪಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿಸಂತ್ರಸ್ತರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆಯೇ? ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಶರಣರಿಗೆ ಜಾಮೀನು ನೀಡಬಾರದು ಎಂದು ನ್ಯಾಯಪೀಠವನ್ನು ಕೋರಿದರು.
ಸರ್ಕಾರಿ ಅಭಿಯೋಜಕರು, ಶಿವಮೂರ್ತಿ ಶರಣರು ತಮ್ಮ ಮಠದಲ್ಲಿನ ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಿಸಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಹೈಕೋರ್ಟ್‌ಗೆ ಕೋರಿದ್ದರು. ಶರಣರ ಪರ ವಕೀಲರು, ಸಂತ್ರಸ್ತೆಯರ ಮೇಲೆ ಅರ್ಜಿದಾರರು ಲೈಂಗಿಕ ದೌರ್ಜನ್ಯ ನಡೆಸಿಲ್ಲವೆಂದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿರುವ ಕಾರಣ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

 

 

 

 

 

 

 

 

 

Leave a Reply

Your email address will not be published. Required fields are marked *