Share this news

ಅಮರಾವತಿ​ : ಸ್ಕಿಲ್​ ಹಗರಣದ ಎ1  ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

ಆಂಧ್ರದ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ 371 ಕೋಟಿ ಭ್ರಷ್ಟಾಚಾರ ನಡೆಸಿರುವ ಆರೋಪ. 2014ರಲ್ಲಿ ಚಂದ್ರಬಾಬು ನಾಯ್ಡು ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿರುವ ಹಗರಣ. ಟೆಂಡರ್​ ಕಡೆಯದೆ 371 ಕೋಟಿ ಹಣ ಬಿಡುಗಡೆ ಮಾಡಿದ ಅರೋಪ. ಈ ಪ್ರಕರಣದಲ್ಲಿ A1 ಅರೋಪಿಯಾಗಿರುವ ಚಂದ್ರಬಾಬು ನಾಯ್ಡು. ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ್ದ ಸಿಎಂ ಜಗನ್​​. ಹಗರಣದ ಬಗ್ಗೆ ಉತ್ತರಿಸುವಂತೆ ಸೂಚಿಸಲಾಗಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಇನ್ನು ಸಿಐಡಿ ಅಧಿಕಾರಿಗಳು ಬಂಧಿಸಲು ಆಗಮಿಸಿದ ವೇಳೆ ಚಂದ್ರಬಾಬು ನಾಯ್ಡು ಹೈಡ್ರಾಮಾ ಸೃಷ್ಟಿಸಿದ್ದಾರೆ. ನನ್ನ ಹಕ್ಕನ್ನು ಕಸಿಯುವ ಕೆಲಸ ಆಗಿದೆ. ಎಫ್​ಐಆರ್​ ಮಾಡಿಲ್ಲ, ನೋಟಿಸ್​ ನೀಡದೆ ಬಂಧಿಸಲಾಗಿದೆ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಸಿಎಂ ಜಗನ್ ಡೌನ್​ ಡೌನ್​,   ಪೊಲೀಸ್​ ಡೌನ್​ ಡೌನ್​ ಎಂದು ಬೆಂಬಲಿಗರು ಘೋಷಣೆ ಕೂಗಿದ್ದಾರೆ.

Leave a Reply

Your email address will not be published. Required fields are marked *