ನವದೆಹಲಿ:ದೀಪಾವಳಿ ಬಳಿಕ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಸೃಷ್ಟಿಯಾಗುವ ಸಾಧ್ಯತೆಯಿದ್ದು, ಆಪರೇಷನ್ ಕುರಿತಂತೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆಯೊದನ್ನು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ನ ಹಲವು ನಾಯಕರು ನವೆಂಬರ್ 15 ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಹೇಳಿಕೆ ನೀಡಿದ್ದು ಇದು ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಬಿಜೆಪಿ-ಜೆಡಿಎಸ್ ನ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದು, ನವೆಂಬರ್ 15 ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ನಡುನಡುವೆ ಬಿಜೆಪಿ ಸದ್ದಿಲ್ಲದೇ ಕಾಂಗ್ರೆಸ್ ನ ಅಸಮಾಧಾನಿತ ಶಾಸಕರನ್ನು ಸೆಳೆಯಲು ತಂತ್ರಗಾರಿಕೆ ರೂಪಿಸುತ್ತಿದೆ ಎನ್ನಲಾಗಿದ್ದು, ಮುಂಬಯಿಯಲ್ಲಿ ಈ ಕುರಿತು ಸಭೆ ನಡೆದಿದೆ ಎನ್ನಲಾಗಿದೆ. ಆದರೆ ರಾಜಕೀಯದಲ್ಲಿ ಸಾಕಷ್ಟು ಪಳಗಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರ ಜತೆ ನಿಕಟ ಸಂಪರ್ಕ ಹೊಂದಿದ್ದು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ