ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಆಗಸ್ಟ್ 15 ರಂದು ಮೈಸೂರು ಅರಮನೆಯ ಶ್ರೀಮಾನ್ ಮಹರಾಜರಾದ ಯದುವೀರ ಕೃಷ್ಣದತ್ತ ಒಡೆಯರ್ ಆಗಮಿಸಲಿದ್ದಾರೆ.
ಅದೇ ದಿನ ಮೈಸೂರಿನಿಂದ ಹೊರಟು ಬೆಳಿಗ್ಗೆ 11:00 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಮಧ್ಯಾಹ್ನ 12:00 ಗಂಟೆಗೆ ತಲುಪಲಿದ್ದು, ಸಾಂಪ್ರದಾಯಿಕ ಗೌರವ ಮೆರವಣಿಗೆಯ ಮೂಲಕ ಸಂಸ್ಥೆಗೆ ಅವರನ್ನು ಸ್ವಾಗತಿಸಲಾಗುತ್ತದೆ. ಬಳಿಕ ಮಧ್ಯಾಹ್ನ 12:30 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಸ್ವಾತಂತ್ರ್ಯೋತ್ಸವದ ಮಹತ್ವದ ದಿನದಂದು ಅವರು ನೂತನವಾಗಿ ನಿರ್ಮಾಣಗೊಂಡಿರುವ “ರಾಜ ಸಭಾಂಗಣ” ವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ ಸಭಾಕಾರ್ಯಕ್ರಮದಲ್ಲಿ 2022-2023 ನೇ ಸಾಲಿನಲ್ಲಿ ನಡೆದ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದ ಪದವಿಪೂರ್ವ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳನ್ನು ಹಾಗೂ ಜೆಇಇ, ನಿಟ್, ಐಐಟಿ ಪರೀಕ್ಷೆಗಳಲ್ಲಿ ಅಭೂತಪೂರ್ವ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ. ಅಲ್ಲದೆ ಮಹಾರಾಜರಾದ ಯದುವೀರ ಕೃಷ್ಣದತ್ತ ಒಡೆಯರನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಸಂಸ್ಥೆಯ ಆಧ್ಯಕ್ಷರಾದ ಯುವರಾಜ ಜೈನ್, ಆಡಳಿತ ಡೈರೆಕ್ಟರ್ ಡಾ.ಬಿಪ್.ಪಿ. ಸ0ಪತ್ ಕುಮಾರ್ ಹಾಗೂ ಉಪನ್ಯಸಕರದ ಡಾ. ವಾದಿರಾಜ ಕಲ್ಲೂರಾಯ ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

