Share this news

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆ ಜುಲೈ 1ರಂದು ಜಾರಿಗೆ ಬಂದಿದೆ. ಆದರೆ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ 5 ಕೆಜಿ ಅಕ್ಕಿ ಜೊತೆ ಮತ್ತೆ 5 ಕೆಜಿ ಅಕ್ಕಿ ನೀಡಬೇಕಿತ್ತು. ಆದ್ರೆ ಅಕ್ಕಿ ಸಮಸ್ಯೆ ಹಿನ್ನೆಲೆ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಘೋಷಿಣೆ ಮಾಡಿತ್ತು. ಅದರಂತೆ ಇಂದಿನಿAದ ಅನ್ನ ಭಾಗ್ಯ ಯೋಜನೆ ರಾಜ್ಯಾದ್ಯಂತ ಜಾರಿಗೆ ಬಂದಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಕೇಂದ್ರದ 5 ಕೆಜಿ ಅಕ್ಕಿ ವಿತರಣೆ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಸದ್ಯಕ್ಕೆ ಕುಟುಂಬದ ಪ್ರತಿ ವ್ಯಕ್ತಿಗೆ 170 (ಪ್ರತಿ ಕೆ.ಜಿಗೆ 34 ರೂಪಾಯಿಗಳಂತೆ) ನೀಡುತ್ತೇವೆ. 90 ಪರ್ಸೆಂಟ್ ಫಲಾನುಭವಿಗಳಲ್ಲಿ ಖಾತೆಗಳಿವೆ. ಅಕೌಂಟ್ ಇಲ್ಲದವರು ಮಾಡಿಸಿಕೊಳ್ಳಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುವ ವ್ಯವಸ್ಥೆಯಿರುತ್ತದೆ ಎಂದಿದ್ದಾರೆ.

ಅಷ್ಟೆ ಅಲ್ಲದೆ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎಂಎಸ್‌ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದರೆ ಕೇಂದ್ರ ಸರ್ಕಾರ ಹೆಚ್ಚಿನ ಅಕ್ಕಿ ನೀಡಲು ಸಹಕಾರ ನೀಡಿಲ್ಲ. ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಅಕ್ಕಿಯನ್ನು ಮೂರು ಹೊತ್ತು ಜನರು ಸೇವಿಸುವುದಿಲ್ಲ. ದಕ್ಷಿಣ ಭಾಗದ ಜನರಿಗೆ ರಾಗಿ ನೀಡುತ್ತೇವೆ. ಉತ್ತರ ಕರ್ನಾಟಕ ಜನರಿಗೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ ಜೋಳ ಅಥವಾ ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ ಎಂದರು.

Leave a Reply

Your email address will not be published. Required fields are marked *