ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಪಿಯುಸಿ ತರಗತಿಗಳಿಗೆ ಇಂದಿನಿಂದ ದಾಖಲಾತಿ ಆರಂಭಗೊಂಡಿದೆ.
ಜೂನ್ 1 ರಿಂದ ಪಿಯು ಕಾಲೇಜು ಆರಂಭಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಮೇ.22 ರ ಇಂದಿನಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, 2023-24ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯನ್ನು ಏಪ್ರಿಲ್ 06ರಂದು ಪ್ರಕಟಿಸಲಾಗಿತ್ತು. ಆದರೆ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಹಿತದೃಷ್ಠಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.
ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿಯಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಯನ್ನು ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.
ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಕ್ಟೋಬರ್ 14 ರಿಂದ 29ರವರೆಗೆ ಮಧ್ಯಂತರ ರಜೆಯಿದ್ದು,,2024ರ ಮಾರ್ಚ್ 30ರಂದು ಶೈಕ್ಷಣಿಕ ವರ್ಷದ ಕೊನೆಯ ದಿನವಾಗಿದ್ದು,ಮಾರ್ಚ್ 31ರಿಂದ ಬೇಸಿಗೆ ರಜೆ ಪ್ರಾರಂಭಗೊಳ್ಳಲಿದೆ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.