Share this news

ರಾಂಚಿ: 2023ರಲ್ಲಿ ಶ್ರೀಲಂಕಾ, ನ್ಯೂಜಿಲೆಂಡ್ ಸರಣಿಗಳನ್ನು ಗೆದ್ದು ತುಂಬು ಆತ್ಮವಿಶ್ವಾಸದಲ್ಲಿರುವ ಭಾರತ ತಂಡ ಮತ್ತೊಂದು ಸೀಮಿತ ಓವರ್ ಚಾಲೆಂಜ್‌ಗೆ ರೆಡಿಯಾಗಿದ್ದು, ಇಂದಿನಿAದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಹಿರಿಯರ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ ಮಿಂಚಲು ಮತ್ತೊಂದು ಅವಕಾಶ ಲಭಿಸಿದೆ. ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ನಾಯಕತ್ವದ ಅಗ್ನಿಪರೀಕ್ಷೆಗೆ ಒಳಗಾಗಲಿದ್ದಾರೆ. ಲಂಕಾ ವಿರುದ್ಧದ ಸರಣಿಯಲ್ಲಿದ್ದ ಬಹುತೇಕ ಆಟಗಾರರು ಈ ಸರಣಿಯಲ್ಲೂ ಆಡುತ್ತಿದ್ದು, ಹೆಚ್ಚಿನ ಬದಲಾವಣೆಯಾಗುವ ಸಾಧ್ಯತೆ ಇಲ್ಲ.

ಮುಂಗೈ ಗಾಯಕ್ಕೆ ತುತ್ತಾಗಿರುವ ಋತುರಾಜ್ ಗಾಯಕ್ವಾಡ್ ಈ ಸರಣಿಯಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ರಣಜಿ ಸೇರಿದಂತೆ ದೇಸಿ ಟೂರ್ನಿಗಳಲ್ಲಿ ಅಬ್ಬರಿಸಿದ್ದ ಪೃಥ್ವಿ ಶಾಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಕ್ಕರೂ ಮೊದಲ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ. ಶುಭ್‌ಮನ್ ಗಿಲ್‌ಗೆ ಅವಕಾಶ ನೀಡುವುದಾಗಿ ಹಾರ್ದಿಕ್ ಪಾಂಡ್ಯ ಖಚಿತಪಡಿಸಿದ್ದು, ಇಶಾನ್ ಕಿಶನ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಜಿತೇಶ್ ಶರ್ಮಾ ಕೂಡಾ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ಆಲ್ರೌಂಡರ್‌ಗಳಾಗಿ ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್ ಸಹ ಇದ್ದಾರೆ. ಅಶ್ರ‍್ದೀಪ್, ಉಮ್ರಾನ್, ಶಿವಂ ಮಾವಿ, ಮುಕೇಶ್ ಕುಮಾರ್ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ.

ಈಗಾಗಲೇ ಏಕದಿನ ಸರಣಿಯಲ್ಲಿ 0-3 ಅಂತರದಲ್ಲಿ ಮುಖಭಂಗಕ್ಕೊಳಗಾಗಿರುವ ಕಿವೀಸ್ ಟಿ20 ಸರಣಿಯಲ್ಲಾದರೂ ಗೆಲುವಿನ ನಿರೀಕ್ಷೆಯಲ್ಲಿದೆ. ಆಲ್ರೌಂಡರ್ ಮಿಚೆಲ್ ಸ್ಯಾಂಟ್ನರ್ ತಂಡ ಮುನ್ನಡೆಸಲಿದ್ದು, ಡೆವೋನ್ ಕಾನ್‌ವೇ, ಮೈಕಲ್ ಬ್ರೇಸ್‌ವೆಲ್ ಸೇರಿದಂತೆ ಕೆಲ ಸ್ಫೋಟಕ ಬ್ಯಾಟರ್‌ಗಳ ಬಲವೂ ತಂಡಕ್ಕಿದೆ. ಆದರೆ ಬೌಲಿಂಗ್ ವಿಭಾಗದಲ್ಲಿ ಅನುಭವಿಗಳ ಕೊರತೆ ಎದುರಾಗಬಹುದು

Leave a Reply

Your email address will not be published. Required fields are marked *