Share this news

ಬೆಂಗಳೂರು: ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ. ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದಿನಿಂದ (ಜ.24) ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಧರಣಿ ನಡೆಯಲಿದೆ. ಇನ್ನು ಬಿಎಂಟಿಸಿ  ನೌಕರರು ಫ್ರೀಡಂ ಪಾರ್ಕ್​ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.

ಸಾರಿಗೆ ನೌಕರರ ಪ್ರತಿಭಟನೆಯಿಂದ ಕೆಎಸ್​ಆರ್​ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲವೆಂದು ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಪ್ರಯಾಣಿಕರಿಗೆ ನಿಯಮಿತ, ವ್ಯವಸ್ಥಿತ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶವಿದೆ. ಹೀಗಾಗಿ ಸಾರಿಗೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಸಾರಿಗೆ ಮಂಡಳಿ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

 

Leave a Reply

Your email address will not be published. Required fields are marked *