ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಅಂತಿಮಗೊಳಿಸಲು ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ.
ದೊಡ್ಡಬಳ್ಳಾಪುರದ ಖಾಸಗಿ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ.ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ. ಪಾಟೀಲ್, ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಪ್ರಕಟ ವಿಳಂಬವಾದರೆ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗಿ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡನೇ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುವ ಸಂಬಂಧ ಇಂದಿನ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.