ಬೆಂಗಳೂರು: ರಾಜ್ಯದ ಜನತೆಗೆ ಅನುಕೂಲವಾಗುವಂತೆ ಭೂ ಪರಿವರ್ತನೆಯ ಬಳಿಕ, ಆ ದಾಖಲೆಗಳು ಸಂಬAಧಪಟ್ಟವರಿಗೆ ಏಳು ದಿನಗಳ ಒಳಗಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಸ್ಟೇಟ್ ಕಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ದಶಕಗಳಿಂದ ಭೂ ಪರಿವರ್ತನೆ ಪ್ರಕ್ರಿಯೆಯು ಸಮಸ್ಯೆಯ ಗೂಡಾಗಿದೆ. ಇದನ್ನು ಸರಿ ಪಡಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಭೂ ಪರಿವರ್ತನೆ ಮತ್ತಷ್ಟು ಸರಳೀಕರಣಗೊಳಿಸುವ ನಿಟ್ಟಿನಲ್ಲಿ, ಇದರ ಅವಧಿಯನ್ನು 7 ದಿನಕ್ಕೆ ಇಳಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಜಿಲ್ಲಾಧಿಕಾರಿಯವರು ಪ್ರಮಾಣ ಪತ್ರವನ್ನು ನೀಡಿದ್ದಲ್ಲಿ ಅರ್ಜಿದಾರನಿಗೆ ತಾನು ಸಲ್ಲಿಸಿರುವ ಭೂ ಪರಿವರ್ತನೆ ಸ್ವಯಂ ಜನರೇಟ್ ಆಗಲಿದೆ. ಈ ಹಿಂದೆ ನೊಂದಣಿಗಾಗಿ ಹಲವು ದಾಖಲೆಗಳನ್ನು ಕೊಂಡೊಯ್ಯಬೇಕಿತ್ತು. ಅದರೆ ಈಗ ಕಾವೇರಿ 2.0 ಜಾರಿಗೊಳಿಸಿದ ಬಳಿಕ ಸಬ್ ರಿಜಿಸ್ಟರ್ ಕಚೇರಿಯಲ್ಲೇ ಹಲವು ದಾಖಲೆಗಳು ಲಭ್ಯವಾಗುವುದರಿಂದ ಕೆಲ ದಾಖಲೆಗಳನ್ನು ಮಾತ್ರವೇ ಕೊಂಡೊಯ್ಯಬಹುದು ಎಂದು ತಿಳಿಸಿದರು.