ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇಂದು ಚುನಾವಣೆಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ 2-3 ದಿನಗಳ ಬಳಿಕ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2.3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ. ಇವತ್ತು ಮೊದಲ ಪಟ್ಟಿ ಬಿಡುಗಡೆಯಾಗಬೇಕಿತ್ತು. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.
ನಾವು ಗ್ಯಾರಂಟಿ ಘೋಷಣೆ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿಯವರು ಘೋಷಿಸಿದ್ದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಕೊಡುತ್ತೇವೆ , ಉದ್ಯೋಗ ಸೃಷ್ಟಿ ,ಮಾಡುತ್ತೇವೆ ಎಂದಿದ್ದರು. ಏನಾದ್ರೂ ಮಾಡಿದ್ರಾ ಎಂದು ಪ್ರಶ್ನಿಸಿದ ಡಿಕೆಶಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.