ಕಾರ್ಕಳ : ತೀವೃ ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ತಾಲೂಕಿನ ಈದು ಗ್ರಾಮದ ರೇವತಿ ಎಂಬವರು ತೀವೃ ಅಸ್ವಸ್ಥಗೊಂಡು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈದು ಗ್ರಾಮದ ರೇವತಿ(36) ಎಂಬವರು ಕಳೆದ ಹಲವು ವರ್ಷಗಳಿಂದ ಉಸಿರಾಟ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಕಳೆದ 7 ವರ್ಷಗಳಿಂದ ಈದು ಗ್ರಾಮದ ತನ್ನ ತಾಯಿ ಮನೆಯಲ್ಲಿ ಇಬ್ಬರು ಮಕ್ಕಳ ಜತೆ ವಾಸವಿದ್ದರು.
ರಕ್ತದೊತ್ತಡ ಹಾಗೂ ನಿಶ್ಯಕ್ತಿ ಸಮಸ್ಯೆಗೆ ಬಜಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನವೆಂಬರ್ 29ರಂದು ಬುಧಬಾರ ಏಕಾಎಕಿ ಆರೋಗ್ಯ ಹದಗೆಟ್ಟು ತೀವೃ ಅಸ್ವಸ್ಥರಾದ ರೇವತಿಯವರನ್ನು ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಕುರಿತು ಮೃತರ ಸಹೋದರ ಜಗದೀಶ್ ನೀಡಿದ ದೂರಿನ ಹಿನ್ನಲೆಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ