ನಾಗಪುರ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ 100 ಕೋಟಿ ರು. ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ವಿಚಾರಣೆಗೆ ಒಳಪಟ್ಟಿರುವ ಕುಖ್ಯಾತ ಭೂಗತ ಪಾತಕಿ ಜಯೇಶ್ ಪೂಜಾರಿ ಅಲಿಯಾಸ್ ಶಹೀರ್ ಶಾಕೀರ್ (35), ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹತ್ಯೆಗೂ ಸಂಚು ರೂಪಿಸಿದ್ದ ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.
ಅಲ್ಪಸಂಖ್ಯಾತರ ವಿರುದ್ಧ ಈಶ್ವರಪ್ಪ ಬಹಿರಂಗವಾಗಿಯೇ ನೀಡುತ್ತಿದ್ದ ಹೇಳಿಕೆಗಳಿಂದ ಆಕ್ರೋಶಗೊಂಡಿದ್ದ ನಿಷೇಧಿತ ಪಿಎಫ್‌ಐ ಕಾರ್ಯಕರ್ತನೂ ಆಗಿರುವ ಜಯೇಶ್, ಈಶ್ವರಪ್ಪ ಹತ್ಯೆಗೆ ತನ್ನ ಬೆಂಬಲಿಗರಿಗೆ ಸುಪಾರಿ ನೀಡಿದ್ದ. ವಿವಿಧ ಪ್ರಕರಣಗಳಲ್ಲಿ ಜಯೇಶ್‌ನನ್ನು ವಿಚಾರಣೆಗೆ ಒಳಪಡಿಸಿರುವ ನಾಗಪುರ ಪೊಲೀಸರಿಗೆ ಈಶ್ವರಪ್ಪ ಅವರ ಹತ್ಯೆಯ ಮಾಹಿತಿ ಮಾಹಿತಿ ಸಿಕ್ಕಿದ್ದು, ಅವರು ಜಯೇಶ್‌ನ ಎಲ್ಲಾ ದುಷ್ಕೃತ್ಯಗಳ ಕುರಿತು ಎನ್‌ಐಎಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ಐಎನ ತಂಡವೊಂದು ನಾಗಪುರಕ್ಕೆ ಆಗಮಿಸಿದ್ದು, ಮಾಹಿತಿ ಕಲೆ ಹಾಕುತ್ತಿದೆ. ಜೊತೆಗೆ ಅದು ಈಶ್ವರಪ್ಪ ಹತ್ಯೆ ಸಂಚಿನ ಕುರಿತ ಪ್ರಕರಣಗಳನ್ನು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.