ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿAದ, ಈ ಕುರಿತಂತೆ ಸಂಬAಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.
ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು.ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆೆ ಸಂಬAಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದAತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು ಎಂದರು.
ಸಮಾಜಘಾತುಕ ಭಾಷಣ/ ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ,ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ, ರಾಜ್ಯ ಸರಕು ಮತ್ತು ಸೇವೆ ಇಲಾಖೆ, ಹೆಚ್ಚುವರಿ ನಿರ್ದೇಶಕರು(ತನಿಖೆ), ಆದಾಯ ತೆರಿಗೆ ಇಲಾಖೆ, ಉಪ ಆಯುಕ್ತರು, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆ, ಹೆಚ್ಚುವರಿ ನಿರ್ದೇಶಕರು, ರೆವಿನ್ಯೂ ಇಂಟಲಿಜೆನ್ಸ್, ಉಪ ನಿರ್ದೇಶಕರು, ಜಾರಿ ನಿರ್ದೇಶನಾಲಯ, ಬೆಂಗಳೂರು ವಲಯ, ವಲಯ ನಿರ್ದೇಶಕರು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್, ಸಿಐಎಸ್ಎಫ್, ಸಹಾಯಕ ಭದ್ರತಾ ಆಯುಕ್ತರು, ರೈಲ್ವೆ ಪೊಟೆಕ್ಷನ್ ಪೊರ್ಸ್, ಜನರಲ್ ಮ್ಯಾನೇಜರ್, ಆರ್ಬಿಐ, ಡಿಜಿಎಂ, ಎಸ್ಎಲ್ಬಿಸಿ, ಜನರಲ್ ಮ್ಯಾನೇಜರ್, ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ನಿರ್ದೇಶಕರು, ಅಂಚೆ ಸೇವೆಗಳು, ಕರ್ನಾಟಕ ವೃತ್ತ ಮೊದಲಾದವರು ಹಾಜರಿದ್ದರು.
.