ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿ ಪ್ರವೀಣನನ್ನು ಭಾರೀ ಪೊಲೀಸ್ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಹಂತಕನ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ.
ಹಂತಕ ಪ್ರವೀಣ್ ಚೌಗಲೆಯನ್ನು ಸ್ಥಳ ಮಹಜರಿಗೆ ಕರೆ ತಂದಾಗ ಸ್ಥಳೀಯರು ಸುತ್ತುವರಿದಿದ್ದರು. ಆತನನ್ನು ನಮಗೆ ಒಪ್ಪಿಸಿ ಎಂದು ಪ್ರತಿಭಟನೆಯನ್ನೂ ನಡೆಸಿದ್ದರು. ಇತ್ತ ಜೈಲಿನಲ್ಲೂ ಖೈದಿಗಳಿಂದಲೇ ಹಲ್ಲೆ ನಡೆಯಬಹುದು ಭಯದಿಂದ ಪ್ರತ್ಯೇಕ ಸೆಲ್ ನಲ್ಲಿ ಇರಿಸುವ ದೃಷ್ಟಿಯಿಂದ ಪ್ರವೀಣನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಕೋರ್ಟ್ ವಿಚಾರಣೆ ನಡೆಸಿ ಆದೇಶ ನೀಡಿದೆ.
ಬೆಳಗಾವಿ ಅಧಿವೇಶನದಲ್ಲಿ ಕರಾವಳಿಯ ರಾಜಕೀಯ ನಾಯಕರು ಈ ಬಗ್ಗೆ ಧ್ವನಿ ಎತ್ತಬೇಕಾಗಿದೆ. ರಾಜಕಾರಣ ದೂರವಿಟ್ಟು ಸರ್ಕಾರದ ಮೇಲೆ ಒತ್ತಡ ತಂದು, ಪಾಪಿ ಪ್ರವೀಣ್ ಚೌಗಲೆಗೆ ಆದಷ್ಟು ಬೇಗ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ