ಬೆAಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ. ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್ ಬ್ಲಾಸ್ಟ್ ಮಡಲು ಸಂಚು ರೂಪಿಸಿದ್ದೆವು ಎನ್ನುವ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆಯೇ ಬಾಯಿಬಿಟ್ಟಿದ್ದ ಉಗ್ರ ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ.
ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ದರೆ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿದ್ದಾನೆ. ಹೀಗಾಗಿಯೇ ಎನ್‌ಐಎ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಮಲೆನಾಡಲ್ಲಿ ಬೀಡು ಬಿಟ್ಟಿದ್ದಾರೆ.