Share this news

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ವಿವಾದ ರಾಜ್ಯಾದ್ಯಂತ ಕೋಲಾಹಲ ಎಬ್ಬಿಸಿದೆ. ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾಯಿಸಿ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್‌ಪಿ ಅಕ್ಷಯ್ ಅಕ್ಷಯ್ ನೇಮಕ ಮಾಡಿದ್ದಾರೆ.

ಆರಂಭದಿAದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪರಿಗೆ ತನಿಖೆ ವಹಿಸಲಾಗಿದೆ.

ಸದ್ಯ ಐಜಿಪಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಮಹಿಳಾ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಆಪರೇಟ್ ಆಗುತ್ತಿದ್ದ ಎಲ್ಲ ಮೊಬೈಲ್‌ಗಳ ಕಾಲ್ ಡೀಟೇಲ್ಸ್ಗಳನ್ನು ಪತ್ತೆ ಹಚ್ಚಿದ್ದು, ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಜೊತೆಗೆ ಅನಗತ್ಯ ವ್ಯಕ್ತಿಗಳು ಕಾಂಪೌAಡ್ ಆವರಣದಲ್ಲಿ ಓಡಾಟ ಆರೋಪ ಕೇಳಿಬಂದಿದ್ದು, ಕಾಲೇಜು ಆವರಣದಲ್ಲಿನ ಸಿಸಿ ಕ್ಯಾಮರಾಗಳ ಫೂಟೇಜ್‌ನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *