ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಉಡುಪಿ ಪುರಭವನದಲ್ಲಿ ಮಾರ್ಚ್19 ರಂದು ಭಾನುವಾರ ನಡೆಯಿತು.
ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಜೆಕಾರು ನಂದಾದೀಪ ಆಟೋಮೊಬೈಲ್ಸ್ ಹಾಗೂ ಗ್ಯಾರೇಜ್ ಮಾಲಕ ಸಾಣೂರು ಅರುಣ್ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ವಿಧಾನಸಭಾ ಸಚಿವಾಲಯದ ನಿವೃತ್ತ ಅಧಿಕಾರಿ ರಘು ಶ್ರೀನಿವಾಸ ಶೆಟ್ಟಿಗಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಪುಂಡಲೀಕ ಸುವರ್ಣ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕ ಹಾಗೂ ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ, ಕೇಶವ ಕಿಶೋರ್,ಗ್ಯಾರೇಜ್ ಮಾಲಕರ ಸಂಘದ ಉಪಾಧ್ಯಕ್ಷ ಪ್ರಭಾಕರ, ಕೆ, ಉಡುಪಿ ಕ್ಲಾಸಿಕ್ ಆಟೊಮೊಬೈಲ್ಸ್ ಮಾಲಕ ಸಂತೋಷ್ ಕುಮಾರ್, ಕುಂದಾಪುರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಆಚಾರ್, ಬೈಂದೂರು ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕೃಷ್ಣಯ್ಯ ಮದ್ದೋಡಿ, ಬ್ರಹ್ಮಾವರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಕಳ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಅಬ್ದುಲ್ ಮೊಯ್ದಿನ್ ಮುಂತಾದವರು ಉಪಸ್ಥಿತರಿದ್ದರು.

