Share this news

ಉಡುಪಿ: ವೈದ್ಯೆಯೊಬ್ಬರು ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ತೀವೃ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ತೀವೃ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ವೈದ್ಯೆ.
ಡಾ.ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *