ಉಡುಪಿ: ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆ ಇದರ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರವು ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆಯಿತು
ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆಯ ಸದಸ್ಯ
ಶ್ರೀಕಾಂತ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ತರಬೇತಿ ಶಿಕ್ಷಕರಿಗೆ ಅನಿವಾರ್ಯವಾಗಿದೆ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಂತೋಷವನ್ನುಂಟು ಮಾಡಲು ವಿದ್ಯಾರ್ಥಿಗಳು ಸಂತೋಷದಾಯಕವಾಗಿ ಇರಲು ಶಿಕ್ಷಕರು ಸಂಪತ್ಭರಿತವಾಗಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಡ ಬ್ರಹ್ಮಾವರ ವಲಯದ ಸಮೂಹ ಸಂಪನ್ಮೂಲ ಶಿಕ್ಷಕಿ ಸವಿತಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಯ ಶಿಕ್ಷಕರಿಗಾಗಿ ಆಯೋಜಿಸಿದ ಈ ಕಾರ್ಯಗಾರದಲ್ಲಿ12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22 ಶಿಕ್ಷಕರು ಇದರ ಪ್ರಯೋಜನವನ್ನು ಪಡೆದರು.
ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ವಿವೇಕ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ನ ಶೈಕ್ಷಣಿಕ ಅಧಿಕಾರಿ ದಿವಾಕರ ಆಚಾರ್ಯ, ಸಂಸ್ಥೆಯ ಮುಖ್ಯೋಪಾಧ್ಯಾಯನಿ ಸಂಗೀತಾ ,ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ ಉಪಸ್ಥಿತರಿದ್ದರು.
ಕಾರ್ಯಾಗಾರದ ಸಮರೋಪ ಸಮಾರಂಭವು ಆನೆಗುಂದಿ ಸರಸ್ವತಿ ಪೀಠ ಕಾರ್ಯದರ್ಶಿ ಗುರುರಾಜ್ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಅನಿತಾ ಅತಿಥಿಗಳನ್ನು ಸ್ವಾಗತಿಸಿ,ಶರೋನ್ ವಂದಿಸಿದರು.
ರಮ್ಯಾ ಕಾರ್ಯಕ್ರಮ ನಿರೂಪಿಸಿದರು.