Share this news

ಉಡುಪಿ : ರಾಜ್ಯದೆಲ್ಲೆಡೆ ಡ್ರಗ್ಸ್ ಮಾರಾಟ ದಂಧೆ ಹೆಚ್ಚುತ್ತಿರುವ ಬೆನ್ನಲ್ಲೇ ಉಡುಪಿಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಮಾರಾಟ ದಂಧೆಯಲ್ಲಿ ಭಾಗಿಯಾಗಿರುವ ಆತಂಕಕಾರಿ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.

ನೂತನ ಗೃಹ ಸಚಿವ ಜಿ.ಪರಮೇಶ್ವರ್ ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇನೆ, ಈ ಕುರಿತು ಮಾಸ್ಟರ್ ಪ್ಲಾನ್ ರೂಪಿಸಿ ತುಮಕೂರಿನಿಂದಲೇ ಈ ಜಾಲವನ್ನು ಮಟ್ಟಹಾಕುವ ಆಂದೋಲನ ನಡೆಸುತ್ತೇವೆ ಎಂದಿದ್ದರು.ಅವರ ಹೇಳಿಕೆಯ ಬೆನ್ನಲ್ಲೇ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ ತಲೆಮರೆಸಿಕೊಂಡಿದ್ದು, ಹುಡುಕಾಟ ಆರಂಭಿಸಿದ್ದಾರೆ.


ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ಚರ ನಗರದಲ್ಲಿ ಈ ಮೂವರು ಗಾಂಜಾ ಮಾರುತ್ತಿದ್ದರು. ಈ ವೇಳೆ ದಾಳಿದ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಬರೊಬ್ಬರಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್‌ ಮಾದಕ ದ್ರವ್ಯವನ್ನು ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್‌ ಬೈಕ್‌ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್‌ ಫೋನ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ತಲೆಮರೆಸಿಕೊಂಡ ಮತ್ತೋರ್ವ ಆರೋಪಿ ಅಪ್ಸಿನ್ ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ಬಲಿಯಾಗದಂತೆ ಇನ್ಸ್​ಪೆಕ್ಟರ್​ನಿಂದ ಮೇಲಿನ ಹಂತದ ಅಧಿಕಾರಿಗಳು ತಿಂಗಳಿಗೊಮ್ಮೆ ಶಾಲಾ ಕಾಲೇಜುಗಳಿಗೆ ಭೇಟಿ ಕೊಡಬೇಕು. ವಿದ್ಯಾರ್ಥಿಗಳಿಗೆ ಕಾನೂನು ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

Leave a Reply

Your email address will not be published. Required fields are marked *