ಉಡುಪಿ: ದೇಶದಾದ್ಯಂತ ಸಂಭ್ರಮ ಸಡಗರಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಈ ಜಿಲ್ಲೆಗಳಲ್ಲಿ ಸೆ.18ರ ಬದಲಾಗಿ ಸೆ.19ರ ಮಂಗಳವಾರ ಗಣೇಶ ಹಬ್ಬದ ರಜೆಯನ್ನು ಘೋಷಣೆ ಮಾಡಲಾಗಿದೆ.
ದ.ಕ ಜಿಲ್ಲೆಯಲ್ಲಿ ಸೆ.19ರಂದು ಗಣೇಶ ಚತುರ್ಥಿ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸರ್ಕಾರಿ ರಜೆ ದಿನಾಂಕವನ್ನು ಬದಲಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶ ಹಿನ್ನೆಲೆ ಸೆ.19ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸೆ.18 ಸೋಮವಾರ ರಜೆಯಿದೆ. ಆದರೆ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲ ಹಿನ್ನೆಲೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋಮವಾರದ ಬದಲಾಗಿ ಮಂಗಳವಾರ (ಸೆ.19ರಂದು) ರಜೆ ನೀಡಲು ಆದೇಶ ಹೊರಡಿಸಲಾಗಿದೆ.

