ಕಾರ್ಕಳ : ಉಡುಪಿ ದಕ್ಷಿಣ ಕನ್ನಡ ಉಭಯ ಜಿಲ್ಲೆಗಳಿಗೆ ನಾಡಹಬ್ಬ ನಾಗರ ಪಂಚಮಿ ದಿನ (ಆಗಸ್ಟ್ 21) ಶಾಲಾಕಾಲೇಜು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ .
ಪರಶುರಾಮ ಸೃಷ್ಟಿಯೆಂಬ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕರಾವಳಿಯಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲ್ಪಡುವ ದೈವ ದೇವರುಗಳ ಆರಾಧನೆಯಲ್ಲಿ ನಾಗಾರಾಧನೆಯ ಪ್ರಮುಖವಾದದು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನರು ನಾಗರ ಪಂಚಮಿ ದಿನದಂದು ತಮ್ಮ ಕುಟುಂಬಕ್ಕೆ ಸಂಬಂಧಪಟ್ಟ ಮೂಲಸ್ಥಾನದ ನಾಗದೇವರುಗಳಿಗೆ ಹಾಗೂ ದೇವಸ್ಥಾನಗಳಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ.
ಆದ್ದರಿಂದ ಆಗಸ್ಟ್ 21 ಸೋಮವಾರ ನಾಗರಪಂಚಮಿಯ ವಿಶೇಷ ದಿನದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಸುನಿಲ್ ಮನವಿಯಲ್ಲಿ ತಿಳಿಸಿದ್ದಾರೆ.







