Share this news

ಉಡುಪಿ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಾಹೆ ಮಣಿಪಾಲ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸಹಿ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸಂವಿಧಾನ ಪೀಠಿಕೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಾಹೆಯ ವಿವಿಧ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕರಿಂದ ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸಿಗ್ನೇಚರ್ ಕ್ಯಾಂಪೇನ್ ಮಾಡಲಾಗಿದ್ದು, ಅಲ್ಲಿ ಅಳವಡಿಸಲಾಗಿದ್ದ ಸೆಲ್ಫಿ ಸ್ಟ್ಯಾಂಡ್ ಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಫೋಟೋಗಳನ್ನು ಕ್ಲಿಕ್ಕಿಸಿ. ಸಂತಸ ವ್ಯಕ್ತಪಡಿಸಿದರು.

 

Leave a Reply

Your email address will not be published. Required fields are marked *