Share this news

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು ಶ್ರೀಕೃಷ್ಣ ಮಠದಲ್ಲಿ ಇಂದು ಶ್ರೀ ಕೃಷ್ಣ ಲೀಲೋತ್ಸವ ನಡೆಯಲಿದೆ. ಅಲ್ಲದೆ ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ.

ಶ್ರೀ ಕೃಷ್ಣ ಮಠದಲ್ಲಿ ರಾತ್ರಿ ಕನಕನ ಕಿಂಡಿ ಎದುರು ಮತ್ತು ವಸಂತ ಮಂಟಪದಲ್ಲಿ ಅರ್ಘ್ಯ ಪ್ರದಾನ ಬಿಡಲು ಭಕ್ತರಿಗೆ ಅನುವು ಮಾಡಿಕೊಡಲಾಗುತ್ತದೆ. ಶ್ರೀ ಕೃಷ್ಣ ಮಠವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗುತ್ತಿದೆ ಕೃಷ್ಣಮಠದಲ್ಲಿ ಸೆ.6,7ರಂದು ಬೆಳಿಗ್ಗೆಯಿಂದ ರಾತ್ರಿವರೆಗೆ ದೇವರ ದರ್ಶನ ಎಂದಿನಂತೆ ಇರಲಿದೆ. ಇಂದು (ಸೆ. 6) ಜನ್ಮಾಷ್ಟಮಿ ಪ್ರಯುಕ್ತ ದಿನಪೂರ್ತಿ ಮುದ್ದುಕೃಷ್ಣ ವೇಷಸ್ ಸ್ಪರ್ಧೆ ಸಹಿತ ಭಜನೆ ಮುಂತಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನಾಳೆ (ಸೆ.7) ರಥಬೀದಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಉತ್ಸವ ನಡೆಯಲಿದೆ .
ಮಧ್ಯಾಹ್ನ 3 ಗಂಟೆಗೆ ರಥಬೀದಿಯಲ್ಲಿ ಸ್ವರ್ಣ ರಥದಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಮತ್ತು ಅನಂತೇಶ್ವರ ಚಂದ್ರಮೌಳೇಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳನ್ನು ನವರತ್ನ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುತ್ತದೆ. ಈ ಸಂದರ್ಭ ಗುರ್ಜಿಗಳಿಗೆ ನೇತು ಹಾಕಿರುವ ಮೊಸರು ಕುಡಿಕೆಯನ್ನು ಕೃಷ್ಣಮಠದ ಗೋವಳರು ಒಡೆಯುತ್ತಾರೆ. ಪರ್ಯಾಯ ಶ್ರೀಪಾದರು ಚಕ್ಕುಲಿ ಉಂಡೆ ಪ್ರಸಾದವನ್ನು ಮೆರವಣಿಗೆ ವೇಳೆ ಭಕ್ತರಿಗೆ ವಿತರಿಸುತ್ತಾರೆ. ಆನಂತರ ಮೃಣ್ಮಯ ಮೂರ್ತಿಯನ್ನು ಸಾಂಪ್ರದಾಯಿಕವಾಗಿ ಮಧ್ವ ಸರೋವರದಲ್ಲಿ ಜಲ ಸ್ತಂಭನ ಮಾಡಲಾಗುತ್ತದೆ.

 

Leave a Reply

Your email address will not be published. Required fields are marked *