ಉಡುಪಿ:ಇತ್ತೀಚಿನ ದಿನಗಳಲ್ಲಿ ಎಳೆವಯಸ್ಸಿನವರಲ್ಲಿ ಕಾಡುತ್ತಿರುವ ಹೃದಯಾಘಾತ ಸಮಸ್ಯೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ 17 ರ ಹರೆಯದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದು ಆತಂಕ ಮೂಡಿಸಿದೆ.
ಕಲ್ಯಾಣಪುರದ ಅಫ್ಕಾರ್ (17) ಮೃತ ದುರ್ದೈವಿ.ಅಫ್ಕಾರ್ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ.ಅಲ್ಲದೇ ಈತ
ಸ್ಟೂಡೆಂಟ್ ಇಸ್ಲಾಮಿಕ್ ಅರ್ಗನೈಸೇಶನ್ ಆಫ್ ಇಂಡಿಯಾದ ಸಕ್ರಿಯ ಸದಸ್ಯನಾಗಿದ್ದ. ಅಫ್ಕಾರ್ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ
ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ ಅಫ್ಕಾರ್ಗೆ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.
ಹಿಂದೆ 60 ವರ್ಷ ದಾಟಿದ ನಂತರ ಕಾಡುತ್ತಿದ್ದ ಅನಾರೋಗ್ಯ ಸಮಸ್ಯೆಗಳೆಲ್ಲವೂ ಈಗ ಚಿಕ್ಕ ವಯಸ್ಸಿಗೆ ಕಾಡುವಂತಾಗಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ