ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ತಕ್ಕ ಉತ್ತರ ನೀಡುವಂತೆ ಪ್ರಧಾನಿ ಮೋದಿ ಎನ್‍ಡಿಎ ಸಚಿವರಿಗೆ ಸೂಚಿಸಿದ್ದಾರೆ.
ಬುಧವಾರ ಸಚಿವರ ಜತೆ ಸಂವಾದ ನಡೆಸಿರುವ ಇಂಡಿಯಾ ವರ್ಸಸ್ ಭಾರತ ನಡುವಿನ ವಿಚಾರದಲ್ಲಿ ವಿವಾದಿತ ಹೇಳಿಕೆಗಳನ್ನು ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚಿಸಿದರು.
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಸನಾತನವ ಧರ್ಮವನ್ನು ಕೇವಲ ವಿರೋಧಿಸಬಾರದು, ಅದನ್ನು ರದ್ದುಗೊಳಿಸಬೇಕು. ಈ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ನಾವು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ, ನಾವು ಅದನ್ನು ನಿರ್ಮೂಲನೆ ಮಾಡಬೇಕು. ಅಂತೆಯೇ, ನಾವು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು.