ಮಂಗಳೂರು: ಉಳ್ಳಾಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಎಂಟನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಯಾನೆ ಶಾಫಿ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಗೆ ಮಹಮ್ಮದ್ ಶಾಫಿ ಎಂಬವನ ಪರಿಚಯವಿದ್ದು ಕಳೆದ ಜನವರಿಯಲ್ಲಿ ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆರೋಪಿ ಶಾಫಿ ಬಾಲಕಿಯ ಬಾಯಿಗೆ ಕೈಹಿಡಿದು ರೂಮಿಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಂತರದ ದಿನಗಳಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆತ ಮನೆಗೆ ಬಂದು ಅತ್ಯಾಚಾರವಸಗುತ್ತಿದ್ದ ಇದರಿಂದ ತಾನು ಆರು ತಿಂಗಳ ಗರ್ಭಿಣಿಯಾಗಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಬಾಲಕಿಯು ತನ್ನ ತಾಯಿಯೊಂದಿಗೆ ಬಂದು ಉಳ್ಳಾಲ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿಯ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.