ಮಂಗಳೂರು :ದ.ಕ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಮಂಗಳೂರು, ಮಂಗಳೂರು ತಾಲೂಕು ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ಇವರ ವತಿಯಿಂದ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಂಪದವು, ಗ್ರಾಮ ಪಂಚಾಯತ್ ಎಡಪದವು,ಲಯನ್ಸ್ ಮತ್ತು ಲಿಯೊ ಕ್ಲಬ್ ಮುಚ್ಚೂರು ನೀರುಡೆ ಇವರ ಸಹಕಾರದಲ್ಲಿ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇವರ ಆಶ್ರಯದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉಚಿತ ಸಾರ್ವಜನಿಕ ವೈದ್ಯಕೀಯ ಆರೋಗ್ಯ ಶಿಬಿರ ನಡೆಯಿತು.
ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪದ್ಮನಾಭ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜ ಸೇವೆಯೇ ಭಗವಂತನ ಸೇವೆ ಎಂದು ಪರಿಗಣಿಸಿ ಜನರ ಸೇವೆ ಮಾಡುತ್ತಿರುವ ಮರಾಠಿ ಸಂಘದ ಕಾರ್ಯ ಶ್ಲಾಘನೀಯ. ಮುಂದುವರಿದ ಕಾಲ ಘಟ್ಟದಲ್ಲಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಂತ ಅಗತ್ಯವಾಗಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಆರೋಗ್ಯ ದೊಡ್ಡ ಸಂಪತ್ತು, ಆರೋಗ್ಯವಾಗಿದ್ದರೆ ಸುಂದರ ಬದುಕು ನಡೆಸಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯದ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಶಿಬಿರ ಸಹಕಾರಿಯಾಗಲಿ ಎಂದು ಹಾರೈಸಿದರು.
ಜಿಲ್ಲಾ ಸಂಘದ ಅಧ್ಯಕ್ಷ ರವಿಪ್ರಸಾದ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವೈದ್ಯಾಧಿಕಾರಿ ಡಾ.ಚೈತನ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ರೋಶನ್, ಸಮಾಜ ಸೇವಕ ಚಂದ್ರಹಾಸ ಶೆಟ್ಟಿ ನಾರಳ, ಶಿಬಿರ ವೈದ್ಯಾಧಿಕಾರಿ ರಾಜೇಶ್ವರ್, ಮಹಿಳಾ ಘಟಕ ಅಧ್ಯಕ್ಷೆ ಸವಿತಾ ಜಯಂತ್, ಯೋಗ ಶಿಕ್ಷಕ ಶೇಖರ್ ಕಡ್ತಲ, ಶಿಬಿರ ವ್ಯವಸ್ಥಾಪಕ ವಿ.ಪಿ ನಾಯ್ಕ್ ಮಂಗಳೂರು ಉಪಸ್ಥಿತರಿದ್ದರು.
ಮಹಾಲಿಂಗ ನಾಯ್ಕ್, ಅಶೋಕ ನಾಯ್ಕ್, ಪುರಂದರ ನಾಯ್ಕ್ ಸಹಕರಿಸಿದರು. ಸುಮಾರು 400ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು.
ನಿವೃತ ಶಿಕ್ಷಕ ಮಹಾಲಿಂಗ ನಾಯ್ಕ್ ಸ್ವಾಗತಿಸಿದರು. ಜಿಲ್ಲಾ ಕೋಶಾಧಿಕಾರಿ ಸುಂದರ್ ನಾಯ್ಕ್ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.