Share this news

ನವದೆಹಲಿ: ತಕ್ಷಣಕ್ಕೆ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 295-335 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 165-205 ಸ್ಥಾನ ಗೆಲ್ಲಬಹುದೇ ಹೊರತೂ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲ ಎಂದು ಎಬಿಪಿ ನ್ಯೂಸ್‌ ಮತ್ತು ಸಿ-ವೋಟರ್‌ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಈ ಸಮೀಕ್ಷೆ ಪ್ರಕಾರ ಎನ್‌ಡಿಎ ಮೈತ್ರಿಕೂಟ ಶೇ.42ರಷ್ಟು ಮತ ಪಡೆಯುವ ಮೂಲಕ 295ರಿಂದ 335 ಸ್ಥಾನ ಗಳಿಸಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಶೇ.45ರಷ್ಟು ಮತಗಳೊಂದಿಗೆ 353 ಸ್ಥಾನ ಗೆದ್ದುಕೊಂಡಿತ್ತು. ಇನ್ನು ಕಾಂಗ್ರೆಸ್‌ ನೇತೃತ್ವದಲ್ಲಿ ರಚನೆಗೊಂಡಿರುವ ಇಂಡಿಯಾ ಮೈತ್ರಿಕೂಟ ಶೇ.38ರಷ್ಟು ಮತಗಳೊಂದಿಗೆ 165-205 ಸ್ಥಾನ ಪಡೆಯಲಿದೆ. ಇತರರು ಶೇ.20ರಷ್ಟು ಮತಗಳೊಂದಿಗೆ 35-65 ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ಇದಲ್ಲದೇ ಗರಿಷ್ಠ ಲೋಕಸಭಾ ಕ್ಷೇತ್ರವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳ ಪೈಕಿ ಬಿಜೆಪಿ 73-75 ಸ್ಥಾನ ಹಾಗೂ ಸಮಾಜವಾದಿ ಪಾರ್ಟಿ-ಕಾಂಗ್ರೆಸ್‌ ಮೈತ್ರಿಕೂಟ 4-6, ಬಿಎಸ್ಪಿ 0-2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.
ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ 22-24 ಸ್ಥಾನ ಪಡೆಯಲಿದೆ. ಕಾಂಗ್ರೆಸ್‌ಗೆ ಕೇವಲ 4-6 ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಎಬಿಪಿ ನ್ಯೂಸ್‌ ಸಿ-ವೋಟರ್‌ ಸಮೀಕ್ಷೆ ಹೇಳಿದೆ.
ಇತ್ತ ಮಹಾರಾಷ್ಟ್ರ ಹಾಗೂ ಬಿಹಾರದಲ್ಲಿ ಇಂಡಿಯಾ ಕೂಟಕ್ಕೆ ಮುನ್ನಡೆಯಾಗಲಿದ್ದು,ಮಹಾರಾಷ್ಟ್ರದ 48 ಸ್ಥಾನಗಳಲ್ಲಿ ಎನ್‌ಡಿಎ 19-21 ಹಾಗೂ ಕಾಂಗ್ರೆಸ್‌-ಎನ್‌ಸಿಪಿ-ಠಾಕ್ರೆ ಶಿವಸೇನೆಯ ಮಹಾರಾಷ್ಟ್ರ ವಿಕಾಸ ಅಘಾಡಿ ಕೂಟ 26-28 ಸ್ಥಾನ ಗೆಲ್ಲಲಿದೆ. ಇಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಆಗಲಿದೆ ಎಂದು ಸಮೀಕ್ಷೆ ಭವಿಷ್ಯ ಹೇಳಿದೆ.
ಬಿಹಾರದ 40 ಸ್ಥಾನಗಳಲ್ಲಿ ಎನ್‌ಡಿಎ 16-18 ಸ್ಥಾನಕ್ಕೆ ತೃಪ್ತಿಪಡಲಿದೆ. ಆದರೆ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್‌ನ ಮಹಾಮೈತ್ರಿಕೂಟ 21-23 ಸ್ಥಾನ ಗಳಿಸಿ ಗಮನಾರ್ಹ ಮುನ್ನಡೆ ಸಾಧಿಸಲಿದೆ ಎಂದು ಎಬಿಪಿ ನ್ಯೂಸ್‌ ಸಮೀಕ್ಷೆ ಭವಿಷ್ಯ ನುಡಿದಿದೆ.
ಮೈತ್ರಿಕೂಟಗಳು ಹಾಗೂ ಇತರರು ಗಳಿಸುವ ಒಟ್ಟಾರೆ ಸ್ಥಾನಗಳು ಹಾಗೂ ಮತ ಪ್ರಮಾಣ ಗಮನಿಸುವುದಾದರೆ,
ಎನ್‌ಡಿಎ 295- 335 ಸ್ಥಾನಗಳೊಂದಿಗೆ ಮತಗಳಿಕೆ ಪ್ರಮಾಣ ಶೇ.42ರಷ್ಟು, ಇಂಡಿಯಾ ಮೈತ್ರಿಕೂಟವು 165-205 ಸ್ಥಾನ ಗಳಿಸುವ ಸಾಧ್ಯತೆಯಿದ್ದು, ಮತಗಳಿಕೆ ಪ್ರಮಾಣ ಶೇ.38ರಷ್ಟು ಹಾಗೂ
ಇತರರು 35-65 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದ್ದು, ಶೇ.20ರಷ್ಟು ಮತಗಳಿಕೆ ಪ್ರಮಾಣ ಇರಲಿದೆ ಎಂದು ಸಮೀಕ್ಷೆ ಹೇಳಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *