ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್ ಫೋಟೋ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಈ ಕುರಿತು ಶಿಕ್ಷಣ ಇಲಾಖೆ ಸಿದ್ದತೆ ನಡೆಸುತ್ತಿದ್ದು,ಸರ್ಕಾರದ ಈ ನಿರ್ಧಾರವು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಗಳಿವೆ.
ಈ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಇಡಲಾಗಿದೆ.ದೇಶಭಕ್ತರ ಫೋಟೋ ಹಾಕುವುದರಿಂದ ಮಕ್ಕಳಲ್ಲಿ ದೇಶಾಭಿಮಾನ ಬೆಳೆಯಲು ಸಹಕಾರಿಯಾಗುತ್ತದೆ,ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್ ಸೇರಿದಂತೆ ದೇಶಭಕ್ತರ ಫೋಟೋ ಹಾಕಲು ಚಿಂತನೆ ನಡೆಸಲಾಗಿದೆ ಇದರಲ್ಲಿ ತಪ್ಪೇನಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರಶ್ನಿಸಿದರು.
ಶಿಕ್ಷಣ ಸಚಿವ ಹೇಳಿಕೆಯಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್ ಫೋಟೋ ಹಾಕುವ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ ಎಂಬ ಮಾಹಿತಿ ರವಾನೆಯಾಗಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಹಾಕುವ ವಿಚಾರವಾಗಿ ಭಾರೀ ವಿರೋಧ ವ್ಯಕ್ತವಾಗಿತ್ತು ಇದೀಗ ಮತ್ತೆ ಶಾಲೆಗಳಲ್ಲೂ ಸಾವರ್ಕರ್ ಫೋಟೋ ಹಾಕುವ ಕುರಿತು ಎಲ್ಲರ ಗಮನಸೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳು ಹೋರಾಟ ಮಾಡುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.