ಕಾರ್ಕಳ:ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು ಸಹಕಾರಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿಯ ವೈದ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ ಹೇಳಿದರು.
ಅವರು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಿಬಿರದ ಸಭಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಎಳ್ಳಾರೆಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಯೋಗೀಶ್ ಮಲ್ಯ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ಹೃದ್ರೋಗ ತಜ್ಞೆ ಡಾ.ದಿವ್ಯಾ ಪೈ, ಸ್ಥಳೀಯ ವೈದ್ಯರಾದ ಡಾ.ಪ್ರಮೋದ್ ಕುಮಾರ್ ಹೆಗ್ಡೆ,ಮುನಿಯಾಲು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಸೀತಾರಾಮ ಕಡಂಬ,ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳದ ಪ್ರಾಂಶುಪಾಲರಾದ ಪ್ರೊ|ಉಷಾ ನಾಯಕ್, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕರಾದ ದೇವೇಂದ್ರ ಕಾಮತ್, ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಸಂಘ ರಿ.ದೊಂಡೇರಂಗಡಿಯ ಅಧ್ಯಕ್ಷರಾದ ಹರೀಶ್ ದುಗ್ಗನ್ ಬೆಟ್ಟು ಉಪಸ್ಥಿತರಿದ್ದರು.
ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.