Share this news

ನವದೆಹಲಿ : ನಾಗರಿಕ ಸಂಹಿತೆ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆ-ಸಂಬAಧಿತ ಸಂಸದೀಯ ಸ್ಥಾಯಿ ಸಮಿತಿ ಇಂದು (ಜುಲೈ.3) ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜಿಸಿದೆ.

ಸಭೆಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಭಾಗಿಯಾಗಲಿದ್ದಾರೆ. ಜತೆಗೆ ಇಬ್ಬರು ಸಂಸದರು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರವು ಏಕರೂಪ ನೀತಿ ಸಂಹಿತೆಯ ಮಸೂದೆಯನ್ನು ಸಂಸತ್ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಸಂಸದರ ಅಭಿಪ್ರಾಯವನ್ನು ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಲಾಗಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಸುಶೀಲ್ ಮೋದಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮವಿರುವುದು. ಏಕರೂಪ ನಾಗರಿಕ ಸಂಹಿತೆಯು ಜಾತ್ಯತೀತ ಕಾನೂನಾಗಿದ್ದು, ಅದರ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ, ಇದೀಗ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ.ಹಿAದೂ ಕಾನೂನು ಬುದ್ಧ, ಜೈನ ಮತ್ತು ಸಿಖ್ ಧರ್ಮಗಳ ಅನುಯಾಯಿಗಳಿಗೂ ಅನ್ವಯಿಸುತ್ತದೆ. ವಿಲ್ ಮತ್ತು ಮದುವೆಯಂತಹ ವಿಷಯಗಳಲ್ಲಿ ಈ ಕಾನೂನುಗಳನ್ನು ಪಾಲಿಸಬೇಕು. ಇಡೀ ದೇಶಕ್ಕೆ ಏಕರೂಪದ ಕಾನೂನಿನ ಜೊತೆಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.

Leave a Reply

Your email address will not be published. Required fields are marked *