Share this news

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಹಿಳಾ ನೌಕರರು ಮತ್ತು ವಿದ್ಯಾರ್ಥಿನಿಯರಿಗೆ  ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2023-24 ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ ಮಹಿಳೆಯರಿಗಾಗಿ ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದ್ದು, ಅದರಲ್ಲಿ ಮಹಿಳಾ ನೌಕರರು ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಘೋಷಿಸಿದ್ದರು. ಇದೀಗ ಬಜೆಟ್ ನಲ್ಲಿ ಘೋಷಿಸಿದಂತೆ ಏಪ್ರಿಲ್ 1 ರಿಂದ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ.

ಮಹಿಳಾ ನೌಕರರು ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಗೆ ರಾಜ್ಯ ಸರ್ಕಾರ 350 ಕೋಟಿ ರೂ. ಮೀಸಲಿರಿಸಿದೆ. ಈ ಮೂಲಕ 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ.

 

Leave a Reply

Your email address will not be published. Required fields are marked *