ಶಿವಮೊಗ್ಗ: ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. 7-8 ರಂದು ಸಭೆ ಸೇರಿ ಅಂತಿಮ ಪಟ್ಟಿ ಸಿದ್ದಪಡಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕಾಂಗ್ರೆಸ್ನವರು ಕಳೆದ ಬಾರಿಗಿಂತ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ನವರು ನಮ್ಮವರನ್ನು ಸಂಪರ್ಕ ಮಾಡಿದ್ದಾರೆ. 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದಾರೆ ಎಂದು ಹೇಳಿದ
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9 ರಂದೇ ರಾಜ್ಯಕ್ಕೆ ಆಗಮಿಸಲಿದ್ದು, ಹಾಗೇ ಅಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಕಷ್ಟು ಕುತೂಹಲ ಮೂಡಿಸಿದೆ.