Share this news

ಬೆಂಗಳೂರು: ಐಎಸ್‌ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಬಂಧಿಸಿದ್ದಾರೆ.

2 ವರ್ಷಗಳಿಂದ ಅಲ್‌ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್‌ಖೈದಾ ಗ್ರೂಪ್‌ಗಳಲ್ಲಿ ಸಕ್ರಿಯನಾಗಿದ್ದ. ಸಾಫ್ಟ್ವೇರ್ ಕಂಪನಿಯಲ್ಲಿ ಇದ್ದ ಇತ, ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ.

ಮುಂದಿನ ತಿಂಗಳು ಇರಾಕ್ ಮೂಲಕ ಸಿರಿಯಾ ಹಾಗೂ ಆಫ್ಘನ್‌ಗೆ ಹೋಗಲು ಪ್ಲ್ಯಾನ್ ಮಾಡಿದ್ದ ಇತ ಫ್ಲೈಟ್ ಟಿಕೆಟ್‌ಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾನೆ. ಈ ಹಿಂದೆ ಕೂಡ ಸಿರಿಯಾಕ್ಕೆ ಇರಾಕ್ ಮೂಲಕ ತೆರಳಲು ಯತ್ನಿಸಿದ್ದ. ಆದರೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾದ್ಯವಾಗಿರಲಿಲ್ಲ. ಈಗ ಮಾರ್ಚ್ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗೂ ಅಫ್ಘಾನ್‌ಗೆ ತರಳಲು ಪ್ಲಾನ್ ಮಾಡಿದ್ದ. ಈ ಎಲ್ಲಾ ಖಚಿತ ಮಾಹಿತಿ ಮೇರೆಗೆ ಶಂಕಿತ ಭಯೋತ್ಪಾದಕ ಆರೀಫ್‌ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ. ತನಿಖೆ ಬಳಿಕ ಮತ್ತಷ್ಟು ವಿಚಾರ ಬಯಲಿಗೆ ಬರಲಿದೆ

Leave a Reply

Your email address will not be published. Required fields are marked *