ಬೆಂಗಳೂರು : ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿ ಜುನೈದ್ ಪತ್ತೆಗೆ ಸಿಸಿಬಿ ಬಲೆ ಬೀಸಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಪತ್ತೆಗೆ ಇಂಟರ್‌ಪೋಲ್ ಮೂಲಕ ಲುಕ್‌ಔಟ್ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.
ಕಳೆದ 2 ವರ್ಷಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ಜುನೈದ್, 2021ರಲ್ಲಿ ದುಬೈಗೆ ಪರಾರಿಯಾದ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿದೆ. ಅಲ್ಲದೇ ಜುನೈದ್ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೂ ಮಾಹಿತಿ ನೀಡಿದ್ದು, ಈ ಸಂಬAಧ ಪರಿಶೀಲನೆ ನಡೆಸಿ ಶೀಘ್ರ ಲುಕ್‌ಔಟ್ ನೋಟಿಸ್ ಜಾರಿಗೆ ಮುಂದಾಗಿದೆ. ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿರುವ ಬಂಧಿತ ಶಂಕಿತ ಉಗ್ರರಿಗೆ ಗ್ರೆನೇಡ್ ಸೇರಿದಂತೆ ಹಣ ಸಹಾಯ ಮಾಡುತ್ತಿದ್ದ. ಅಪರಿಚಿತ ವ್ಯಕ್ತಿಯ ಪರಿಚಯ ಮೂಲಕ ಶಂಕಿತ ಉಗ್ರರಿಗೆ ಗ್ರೆನೇಡ್ ಪೂರೈಕೆ ಮಾಡಿದ್ದಾನೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬೆಂಗಳೂರಿನಲ್ಲಿ ಇದ್ದುಕೊಂಡು ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಬಂಧಿತ ಐವರು ಶಂಕಿತ ಉಗ್ರರ ಬಗ್ಗೆ ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಸಿಸಿಬಿ ಪೊಲೀಸರು ಕೇಂದ್ರ ಗೃಹ ಇಲಾಖೆಗೆ ವರದಿ ರವಾನೆ ಮಾಡಿದ್ದಾರೆ. ಬಂಧನವಾದ ಶಂಕಿತ ಉಗ್ರರ ಸಂಖ್ಯೆ, ಹೆಸರು, ಯಾವ ಸೆಕ್ಷನ್‌ನಲ್ಲಿ ಕೇಸ್ ದಾಖಲಾಗಿದೆ. ಶಂಕಿತರ ಮೇಲಿರುವ ಆರೋಪಗಳು ಹಾಗೂ ಸಂಚಿನ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಸಿಸಿಬಿ ಪೊಲೀಸರು ಶಂಕಿತ ಉಗ್ರರ ಕಳೆದ ಎರಡು ವರ್ಷಗಳ ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರು ಈವರೆಗೆ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂದು ಯುಎಪಿಎ ಸೆಕ್ಷನ್ ಅಡಿಯಲ್ಲಿ ಎರಡು ವರ್ಷಗಳ ಸಿಡಿಆರ್ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ