Share this news

ನವದೆಹಲಿ : ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 (ICC ODI World Cup) ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜೊತೆಯಾಗಿ ತಂಡವನ್ನು ಹೆಸರಿಸಿದ್ದಾರೆ.

ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.
ಇಶಾನ್ ಕಿಶನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಕೈಬಿಡಲಾಗಿದೆ. ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೂ ಸಂಪೂರ್ಣ ಫಿಟ್ ಇಲ್ಲದ ಕಾರಣ ಏಷ್ಯಾಕಪ್​ನ ಮೊದಲ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿರುವ ರಾಹುಲ್ ಮುಂದಿನ ಪಂದ್ಯಕ್ಕೆ ಲಭ್ಯರಾಗಿ ವಿಶ್ವಕಪ್​ಗೆ ತಯಾರಾಗಲಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಅದ್ಭುತ ಫಾರ್ಮ್​ನಲ್ಲಿ ಇಲ್ಲದಿದ್ದರೂ ಇವರನ್ನು ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಇರುವ ಕಾರಣ ಸೂರ್ಯಕುಮಾರ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಗುವುದು ಅನುಮಾನ. ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ ಭಾರತದ ಮೊದಲ ಆಯ್ಕೆಯಾಗಿದ್ದು, ಯುಜ್ವೇಂದ್ರ ಚಹಲ್ ಅವರನ್ನು ಪರಿಗಣಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಆಯ್ಕೆ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಇದ್ದಾರೆ. ವೇಗಿಗಳ ಸಾಲಿನಲ್ಲಿ ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಇದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಇಲ್ಲಿದೆ:
ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Leave a Reply

Your email address will not be published. Required fields are marked *