ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತಕ್ಕೀಡಾಗಿದ್ದು ಸುಮಾರು 50ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 300ಕ್ಕೂ ಮಿಕ್ಕಿ ಜನರು ಗಾಯಗೊಂಡಿದ್ದಾರೆ.
ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ. ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು.
ಆರಂಭಿಕ ಮಾಹಿತಿಯಲ್ಲಿ, ಈ ಕೋಚ್‌ಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ. ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ರಕ್ಷಣಾ ತಂಡಗಳೂ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿತ್ತು.ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ.
ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿAದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.
ರೈಲು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಟು ಪುರಟ್ಚಿ ತಲೈವರ್ ಡಾ. ಎಂ.ಜಿ. ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ಸೇರುತ್ತದೆ. ರೈಲು ಮಧ್ಯಾಹ್ನ 3.30 ಕ್ಕೆ ತನ್ನ ಪ್ರಯಾಣವನ್ನು ಪ್ರಾರಂಭಿಸಿದ್ದು ಸಂಜೆ 6.30 ಕ್ಕೆ ಬಾಲಸೋರ್ ನಿಲ್ದಾಣವನ್ನು ತಲುಪಿತು. ಇದು ನಾಳೆ ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು.
ಪ್ರಧಾನಿ ಮೋದಿ, ಮಮತಾ ಸಂತಾಪ:
ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಖುದ್ದು ಮಾಹಿತಿ ಪಡೆಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ