ಬೆಂಗಳೂರು : 5 ವರ್ಷಗಳಿಂದ ಪ್ರೀತಿಸಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ ಎನ್ನುವ ಆರೋಪದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯ ಪೀಠವು ಐದು ವರ್ಷಗಳ ಸಂಬಂಧವು ಬಲವಂತದ್ದೆಂದು ಹೇಳಲು ಸಾಧ್ಯವಿಲ್ಲ ಒಪ್ಪಿಗೆಯಿಂದ ನಡೆದ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರೀತಿ ಮಾಡುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾರೆ ಎಂಬುದಾಗಿ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಪ್ರೀತಿಸಿ ಮದುವೆಯಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ. ಮಲ್ಲಿಕಾರ್ಜುನ ದೇಸಾಯಿ ಗೌಡರ್ ಎಂಬವರು ಐದು ವರ್ಷಗಳಿಂದ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ 5 ವರ್ಷಗಳ ಸಂಬಂಧ ಬಲವಂತದ್ದೆಂದು ಹೇಳಲು ಸಾಧ್ಯವಿಲ್ಲ .ಒಪ್ಪಿತ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಮಲ್ಲಿಕಾರ್ಜುನ ದೇಸಾಯಿ ಗೌಡರ್ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ.