ಹಾವೇರಿ : ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒದಗಿಸಲಾಗಿರುವ ಒಳಮೀಸಲಾತಿಯನ್ನು ವಿರೋಧಿಸಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಬೇಡ್ಕತ್ ಪ್ರತಿಮೆ ಬಳಿ ಬಂದು ತಮ್ಮ ಕಾವಿ ವಸ್ತ್ರದ ಶಲ್ಯದಿಂದಲೇ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹೆಚ್ಚಳ ಮಾಡಿದ ನಂತರ ಕೆಲವೊಂದು ದಲಿತ ವರ್ಗಗಳಿಗೆ ಒಳಮೀಸಲಾತಿಯನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿಯನ್ನು ವಿರೋಧಿಸಿದ ರಾಜ್ಯಾದ್ಯಂತ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗುಂಡೂರು ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮೆಟ್ಟಿಲುಗಳನ್ನು ನಿರ್ಮಿಸಿ ಎತ್ತರದ ವೇದಿಕೆಯನ್ನು ನಿರ್ಮಿಸಲಾಗಿದೆ. ಈ ವೇದಿಕೆಯ ಮೇಲೆ ಹತ್ತಿದ ಬಂಜಾರ ಸಮುದಾಯದ ಸ್ವಾಮೀಜಿ ಅಂಬೇಡ್ಕರ್ ಪ್ರತಿಮೆ ಬಳಿಯೇ ತಮ್ಮ ಕಾವಿ ವಸ್ತ್ರ ಶಲ್ಯದಿಂದ ನೇಣು ಕುಣಿಕೆ ತಯಾರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.