ಮೂಡುಬಿದಿರೆ: ತಾಲೂಕಿನ ಕಡಂದಲೆ ಗ್ರಾಮದ ಪೂಪಾಡಿಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು.
ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಪಾಲಡ್ಕ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕಾಂಗ್ಲಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯಿತ್ ಮಾಜಿ ಅಧ್ಯಕ್ಷೆ ಸವಿತಾ ಟಿ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಕೋಟ್ಯಾನ್, ಕಾಂತಿ ಶೆಟ್ಟಿ, ಓಸ್ವಾಲ್ಡ್ ಪಿಂಟೊ, ಬಿಸಿಎಂ ಹಾಸ್ಟೆಲಿನ ಮೇಲ್ವಿಚಾರಕ ಅರುಣ್ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಟಿ ಎನ್ ಕೆಂಬಾರೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಎಲ್ಲರಿಗೂ ಲಘು ಉಪಹಾರ, ಸಿಹಿತಿಂಡಿ ವಿತರಿಸಲಾಯಿತು.





