ಕಡಬ: ರೆಂಜಿಲಾಡಿ ಗ್ರಾಮದಲ್ಲಿ ನಿದ್ದೆಗೆಡೆಸಿದ್ದ ಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ
ಫೆ.20 ರಂದು ಬೆಳಗ್ಗೆ ರೆಂಜಿಲಾಡಿಯ ನೈಲ ನಿವಾಸಿಗಳಾದ ರಂಜಿತಾ ರೈ ತ್ತು ಅವರ ರಕ್ಷಣೆಗೆ ಧಾವಿಸಿದ ರಮೇಶ್ ರೈ ಎಂಬವರನ್ನು ಆನೆ ದಾಳಿ ಮಾಡಿ ಕೊಂದಿತ್ತು. ಅವರಿಬ್ಬರ ಮೃತದೇಹ ತೆಗೆಯುವ ಮುಂಚೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಡಿಎಫ್ಒ ಸ್ಥಳಕ್ಕೆ ಬರುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.
ಈ ಬೆನ್ನಲ್ಲೆ ನಿದ್ದೆಗೆಡೆಸಿದ್ದ ಕಾಡಾನೆ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಸ್ಥಳೀಯ ಕಡಬ ಪೊಲೀಸರಿಂದ 7 ಜನರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗೊಂಡಿ ದ್ದಾರೆ.. ಬಳಿಕ ಆರೋಪಿಗಳು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ, ಪೊಲೀಸರು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ ಎಂದು ಉಪ ವಲಯ ಅರಣ್ಯ ಅಧಿಕಾರಿಯವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.