ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬAದಿದೆ.
ರಬ್ಬರ್ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳನ್ನು ನೋಡಿದ ಜನರು ಆತಂಕಕ್ಕೊಳಗಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆಗಳು ತಾಲೂಕಿನಲ್ಲಿ ಬೀಡುಬಿಟ್ಟಿವೆ.